Breaking News

ಮೋದಿ ತೆರಳುವ ರಸ್ತೆಯಲ್ಲಿ ಸ್ಪೋಟಕ ಪತ್ತೆ ಕೇಸ್ : ಪೊಲೀಸ್ ಅಧಿಕಾರಿಗಳು ಸೇರಿ 6 ಸಿಬ್ಬಂದಿ ಸಸ್ಪೆಂಡ್!

ಬೆಂಗಳೂರು ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಸಂಭವಿಸಿದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಪ್ರಧಾನಿ ಸಂಚರಿಸುವ ಮಾರ್ಗದಲ್ಲೇ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಓರ್ವ ಪಿಎಸ್‌ಐ, ಓರ್ವ ಎಎಸ್‌ಐ ಸೇರಿದಂತೆ ಒಟ್ಟು ಆರು ಮಂದಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಧಾನಿ ಮೋದಿ ಇತ್ತೀಚೆಗೆ ಬೆಂಗಳೂರಿನ ಹೊರವಲಯದ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದ ವೇಳೆ ಬೆಂಗಳೂರು ದಕ್ಷಿಣ ತಾಲೂಕಿನ ವಡೆರಹಳ್ಳಿ ಗೇಟ್ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಇದು ಭದ್ರತಾ ವಲಯದಲ್ಲಿ ಭಾರಿ ಆತಂಕಕ್ಕೆ ಕಾರಣವಾಗಿತ್ತು. ವಿವಿಐಪಿ ಭದ್ರತೆಯ ನಡುವೆ ಇಂತಹ ಘಟನೆ ನಡೆದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಹಾಗೂ ಭದ್ರತಾ ಸಂಸ್ಥೆಗಳು ತನಿಖೆ ಆರಂಭಿಸಿವೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಬೆಂಗಳೂರು ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ ಅಮಾನತು ಆದೇಶ ಹೊರಡಿಸಿದ್ದು, ಪ್ರಧಾನಿ ಭೇಟಿ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ. ಸ್ಫೋಟಕ ವಸ್ತುಗಳು ಅಲ್ಲಿಗೆ ಹೇಗೆ ಬಂದವು ಹಾಗೂ ಇದರ ಹಿಂದೆ ಯಾರ ಕೈವಾಡವಿದೆ ಎಂಬ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *