Breaking News

ಮೃತರನ್ನೂ ಬಿಡದ ಕಳ್ಳರು: ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು

ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಬಳಿಕ ಮೃತ ಮಹಿಳೆಯ ಮೈಮೇಲಿದ್ದ ಸುಮಾರು 18 ಗ್ರಾಂ ಚಿನ್ನದ ಒಡವೆಗಳನ್ನು ಕಳ್ಳರು ಕದ್ದೊಯ್ದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೇ 17ರಂದು ಕೇರಳ ಮೂಲದ ಪ್ರವಾಸಿಗರ ಜೀಪಿಗೆ ಮೀನು ಸಾಗಾಟ ವಾಹನ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿದ್ದರು. ಗೊಂದಲದ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಕಳ್ಳರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ ಶಿವಮೊಗ್ಗದಲ್ಲಿ ಯುವತಿಯ ಸರ ಕದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಕಾರಿನಲ್ಲಿ ಬಂದು 10 ಗ್ರಾಂ ಚಿನ್ನದ ಸರ ಕದ್ದಿದ್ದ ಮಂಜುನಾಥ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಶೋಕಿಗಾಗಿ ಸರಗಳ್ಳತನ ಮಾಡುತ್ತಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *