Breaking News

ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನ ಸಾವಿಗೆ ಸ್ಫೋಟಕ ಕಾರಣ ಬಹಿರಂಗ: ಗುತ್ತಿಗೆದಾರರ ವಿರುದ್ಧ FIR

ಬೆಂಗಳೂರು ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಿಸಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ನಿರ್ಮಾಣ ಕಾಮಗಾರಿ ಗುತ್ತಿಗೆ ಪಡೆದಿದ್ದ ಚೆನ್ನೈ ಮೂಲದ ಎಎಸ್‌ಆರ್ ಟ್ರೇಡರ್ಸ್ ಕಂಪನಿ ವಿರುದ್ಧ ಎಕ್ಸಿಕ್ಯೂಟಿವ್ ಇಂಜಿನಿಯರ್ ಚಂದ್ರು ದೂರು ನೀಡಿದ್ದಾರೆ. ಬೌರಿಂಗ್ ಹಾಗೂ ಲೇಡಿ ಕರ್ಝನ್ ಮೆಡಿಕಲ್ ಕಾಲೇಜಿನ ಕಟ್ಟಡ ಅವಶೇಷ ಮತ್ತು ಹೆಚ್ಚುವರಿ ತ್ಯಾಜ್ಯವನ್ನು ನಿಯಮಾನುಸಾರ ತೆರವುಗೊಳಿಸದೆ ಕಾಂಪೌಂಡ್ ಪಕ್ಕದಲ್ಲೇ ರಾಶಿ ಹಾಕಲಾಗಿತ್ತು. ತ್ಯಾಜ್ಯದ ಭಾರ ತಡೆಯಲಾಗದೆ ಗೋಡೆ ಕುಸಿದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ತ್ಯಾಜ್ಯ ತೆರವುಗೊಳಿಸುವಂತೆ ಸರ್ಕಾರದಿಂದ ನೋಟಿಸ್ ನೀಡಿದ್ದರೂ ಕಂಪನಿ ಯಾವುದೇ ಸ್ಪಷ್ಟೀಕರಣ ನೀಡಿಲ್ಲ ಎನ್ನಲಾಗಿದೆ. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *