Breaking News

ಗೆಳೆಯರ ಮೇಲೆ ಹಲ್ಲೆ ನಡೆಸಿದ್ದನ್ನು ಕೇಳಲು ಹೋದ ವಿದ್ಯಾರ್ಥಿಗೆ ಚಾಕು ಇರಿತ!

ದಾವಣಗೆರೆ: ಗೆಳೆಯರ ಮೇಲೆ ಹಲ್ಲೆ ನಡೆಸಿದ್ದನ್ನು ಕೇಳಲು ಹೋಗಿದ್ದ ವಿದ್ಯಾರ್ಥಿಗೆ ಚಾಕು ಹಾಕಿದ ಘಟಕ ಶನಿವಾರ (ಮೇ 23) ರಾತ್ರಿ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ದಾವಣಗೆರೆಯ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿಕಾಂ ಅಭ್ಯಾಸ ಮಾಡುತ್ತಿರುವ ಮನೋಜ್ (19) ಚಾಕು ಇರಿತಕೊಳ್ಳಗಾಗಿರುವ ವಿದ್ಯಾರ್ಥಿ. ಮನೋಜ್ ಗೆಳೆಯರು ಜನ್ಮ ದಿನಾಚರಣೆಗೆ ತೆರಳಿದ್ದ ಸಂದರ್ಭದಲ್ಲಿ ಕ್ಷುಲ್ಲಕ ವಿಚಾರವಾಗಿ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು. ಗೆಳೆಯರು ಕರೆದಿದ್ದಕ್ಕೆ ಸ್ಥಳಕ್ಕೆ ತೆರಳಿದ್ದ ಮನೋಜ್ ಯಾವ ಕಾರಣಕ್ಕೆ ಹಲ್ಲೆ ಮಾಡಿದ್ದೀರಿ ಎಂದು ಕೇಳುತ್ತಿದ್ದಾಗ ಏಕಾಏಕಿ ಚಾಕುವಿನಿಂದ ಹೊಟ್ಟೆ, ಕೈಗೆ ತಿವಿಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮನೋಜ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಗಾಯಗೊಂಡಿರುವ ಮನೋಜ್ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ. ತೀವ್ರ ಗಾಯಗೊಂಡಿರುವ ಮನೋಜ್ ಸ್ಥಿತಿ ಗಂಭಿರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಗೆ ಕರೆದೊಯ್ಯುವಂತೆ ವೈದ್ಯರು ತಿಳಿಸಿದ್ದಾರೆ. ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *