ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನವಾಯತ್ ಕಾಲನಿಯಲ್ಲಿ ಮಾರಿಯಮ್ಮನ ಮುರಿನಕಟ್ಟೆ ವಿಚಾರವಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ತೆರವುಗೊಳಿಸಲಾಗಿದ್ದ ಮುರಿನಕಟ್ಟೆಯನ್ನು ಭಾನುವಾರ ಹಿಂದೂ ಸಂಘಟನೆಯ ಕಾರ್ಯಕರ್ತರು ಮರುಸ್ಥಾಪಿಸಿದ್ದರು. ಇದು ಹಿಂದೂಗಳ ಶ್ರದ್ಧಾಭಕ್ತಿಯ ಕೇಂದ್ರವಾಗಿದ್ದು, ಹಲವು ವರ್ಷಗಳಿಂದ ಮರುನಿರ್ಮಾಣಕ್ಕೆ ಒತ್ತಾಯಿಸಲಾಗುತ್ತಿತ್ತು ಎನ್ನಲಾಗಿದೆ. ಆದರೆ ರಾತ್ರಿ ವೇಳೆ ಅನ್ಯಕೋಮಿನ ಕೆಲ ಮುಖಂಡರು ಹಾಗೂ ಜನರು ಆಗಮಿಸಿ ಕಟ್ಟೆಯನ್ನು ಕೆಡವಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ನಿಗಾ ವಹಿಸಿದ್ದಾರೆ. ಘಟನೆ ಹಿನ್ನೆಲೆ ಸೋಮವಾರ ಭಟ್ಕಳ ಬಂದ್ ಹಾಗೂ ಪ್ರತಿಭಟನೆ ನಡೆಯುವ ಸಾಧ್ಯತೆಯೂ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

