Breaking News

ಬೆಂಗಳೂರು : ಡ್ರಾಗರ್‌ನಿಂದ ಇರಿದು ಆಟೋ ಚಾಲಕನ ಕೊಲೆ

ಬೆಂಗಳೂರುದಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೊಬ್ಬನನ್ನು ಡ್ರಾಗರ್‌ನಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಬಾಣವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಗಲೂರಿನ ಸೈಯದ್ ಶಫೀ (36) ಮೃತ ದುರ್ದೈವಿ. ನಿನ್ನೆ ರಾತ್ರಿ ಸ್ನೇಹಿತನೊಂದಿಗೆ ಆಟೋದಲ್ಲಿ ಕುಳಿತಿದ್ದ ವೇಳೆ ಮದ್ಯಪಾನ ಮಾಡಿಕೊಂಡು ಬಂದ ದರ್ಶನ್ ಅಲಿಯಾಸ್ ದಾಸ್ ಜಗಳ ತೆಗೆದು ಹಲ್ಲೆ ನಡೆಸಿದ್ದಾನೆ. ಮಾತಿನ ಚಕಮಕಿ ತೀವ್ರಗೊಂಡಾಗ ಆರೋಪಿ ತನ್ನ ಬಳಿ ಇದ್ದ ಡ್ರಾಗರ್‌ನಿಂದ ಶಫೀ ಅವರ ಕುತ್ತಿಗೆಗೆ ಇರಿದಿದ್ದಾನೆ. ಗಂಭೀರ ಗಾಯಗೊಂಡ ಶಫೀ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಬಾಣವಾರ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಶೋಧ ಮುಂದುವರೆಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *