ಬೆಂಗಳೂರು ನಗರದಲ್ಲಿ ಮತ್ತೆ ‘ಪಂಕ್ಚರ್ ಮಾಫಿಯಾ’ ಸಕ್ರಿಯವಾಗಿದ್ದು, ಸಾರ್ವಜನಿಕರ ವಾಹನಗಳಿಗೆ ಉದ್ದೇಶಪೂರ್ವಕವಾಗಿ ಮೊಳೆಗಳನ್ನು ಚೆಲ್ಲಿ ಹಣ ದೋಚುತ್ತಿರುವ ಆರೋಪ ಕೇಳಿಬಂದಿದೆ. ಈ ಬಾರಿ ಪೊಲೀಸ್ ಠಾಣೆ ಎದುರಿನ ರಸ್ತೆಯಲ್ಲೇ ನೂರಾರು ಮೊಳೆಗಳನ್ನು ಹರಡಿರುವುದು ಆತಂಕಕ್ಕೆ ಕಾರಣವಾಗಿದೆ. ರಾತ್ರಿವೇಳೆ ಮುಖ್ಯರಸ್ತೆಗಳಲ್ಲಿ ಮೊಳೆಗಳನ್ನು ಚೆಲ್ಲಿ ವಾಹನಗಳ ಟೈರ್ ಪಂಕ್ಚರ್ ಆಗುವಂತೆ ಮಾಡಿ, ಬಳಿಕ ಹತ್ತಿರದ ಪಂಕ್ಚರ್ ಅಂಗಡಿಗಳ ಮೂಲಕ ಸವಾರರಿಂದ ಸಾವಿರಾರು ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ನಿಗಾ ವ್ಯವಸ್ಥೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

