Breaking News

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ –

ಕೊಲ್ಲೂರು ದಳಿ ಎಂಬಲ್ಲಿ ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ನಡುವೆ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಮೃತರಾಗಿ ಹಲವರು ಗಾಯಗೊಂಡಿದ್ದು ಮೃತ ಮಹಿಳೆಯ ಚಿನ್ನಾಭರಣಕ್ಕೆ ಕನ್ನ ಹಾಕಿದ ಘಟನೆ ವರದಿಯಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಮೃತರ ಸಂಬಂಧಿಕರು ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ. ಕಳೆದ ರವಿವಾರ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತರಾಗಿ ಮಕ್ಕಳು ಸಹಿತ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಕೇರಳ ಮೂಲದ ಜ್ಯೋತಿ ಹಾಗೂ ಆರಿಯಾ ಅನುಪ್ ಎನ್ನುವರು ಮೃತಪಟ್ಟಿದ್ದರು. ಅಪಘಾತದ ತೀವೃತೆಯ ಸಂದರ್ಭದಲ್ಲಿ ಮೃತ ಮಹಿಳೆ ಜ್ಯೋತಿ ಅವರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಖದೀಮರು ಚಾಣಾಕ್ಷತನದಿಂದ ಕಳವು ಮಾಡಿದ್ದರು. ಮೃತ ಜ್ಯೋತಿ ಕುಟುಂಬಸ್ಥರು ಈ ಶೋಕದಿಂದ ಚೇತರಿಸಿಕೊಂಡ ಬಳಿಕ ಒಡವೆಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮವಹಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *