ಉಳ್ಳಾಲದ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ನಡೆದ ಆರಿಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್ ಆರೀಫ್” ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಜಾಲ್ ಶಾಂತಿನಗರದ ಇಬ್ರಾಹಿಂ ಸಿನಾನ್ ಯಾನೆ ಚಿನ್ನು (21) ಬಂಧಿತನಾಗಿದ್ದು, ಕೊಲೆ ಸಂಚಿನ ವೇಳೆ ಹಾಜರಿದ್ದು ಆರೋಪಿಗಳಿಗೆ ಹಣಕಾಸಿನ ನೆರವು ನೀಡಿದ್ದಾನೆ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈತ ಮೃತ ರೌಡಿಶೀಟರ್ ಟೊಪ್ಪಿ ನೌಫಾಲ್ ಸಹೋದರನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾ.27ರಂದು ತೊಕ್ಕೊಟ್ಟು ಪ್ಲೈಓವರ್ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಆರೀಫ್ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಪ್ರಕರಣದಲ್ಲಿ ಈಗಾಗಲೇ ಹಲವು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ “ಕೋಕಾ ಕಾಯಿದೆ” ಅಡಿಯಲ್ಲಿ ತನಿಖೆ ಮುಂದುವರಿದಿದೆ ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

