ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ಯುವತಿಯೊಬ್ಬರು ಪುರುಷನ ಪ್ರಪೋಸಲ್ ನಿರಾಕರಿಸಿದ ಕಾರಣದಿಂದ ಆತ ತನ್ನ ಗ್ಯಾಂಗ್ ಜೊತೆ ಸೇರಿ ಆಕೆಯ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ.ಆ ಯುವತಿ ಸ್ವಲ್ಪ ಸಮಯದಿಂದ ಅವನೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದರು. ಆದರೆ ಇತ್ತೀಚೆಗೆ ಅವನ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರಿಂದ ಆಕೆ ಅವನೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದರು. ಇದು ಆ ವ್ಯಕ್ತಿಯನ್ನು ಕೆರಳಿಸಿತು. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಆ ಯುವತಿ ಕಾಳಿಕ್ಕನೈಕ್ಕನ್‌ಪಾಳ್ಯಂನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿ. ಅವರು ಚೆನ್ನೈನ ಕಾರ್ತಿ ಎಂಬ ವ್ಯಕ್ತಿಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹ ಬೆಳೆಸಿಕೊಂಡಿದ್ದರು. ಬಳಿಕ ಅವರಿಬ್ಬರೂ ಪ್ರೀತಿಸತೊಡಗಿದ್ದರು. ಆದರೆ, ಇತ್ತೀಚೆಗೆ ಆ ಯುವತಿಗೆ ಕಾರ್ತಿ ವಿರುದ್ಧ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದು ಗೊತ್ತಾಯಿತು. ಹೀಗಾಗಿ ಆಕೆ ತಕ್ಷಣವೇ ಅವನೊಂದಿಗಿನ ಎಲ್ಲ ಸಂಬಂಧಗಳನ್ನು ಕಡಿದುಕೊಳ್ಳಲು ನಿರ್ಧರಿಸಿದರು. ಇದರಿಂದ ಕೋಪಗೊಂಡ ಕಾರ್ತಿ ತನ್ನ ಸ್ನೇಹಿತರೊಂದಿಗೆ ಆಕೆಯ ಮನೆಗೆ ಹೋಗಿ ಪೆಟ್ರೋಲ್ ಬಾಂಬ್‌ಗಳನ್ನು ಎಸೆದು ಪರಾರಿಯಾಗಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

