Breaking News

24 ಕೋಟಿ ಡಿಜಿಟಲ್ ಅರೆಸ್ಟ್ ವಂಚನೆ ಭೇದಿಸಿದ ಬೆಂಗಳೂರು ಸೈಬರ್ ಪೊಲೀಸರು!

ಬೆಂಗಳೂರು: ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಭಾರೀ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣವನ್ನು ಬೆಂಗಳೂರು ಸೈಬರ್ ಕಮಾಂಡ್ ಪೊಲೀಸರು ಭೇದಿಸಿ 6 ಆರೋಪಿಗಳನ್ನು ಬಂಧಿಸಿದ್ದಾರೆ. ಉತ್ತರ ಭಾರತದ ಸೈಬರ್ ಜಾಲಕ್ಕೆ ಸೇರಿದ ಆರೋಪಿಗಳು ಗುರುಗ್ರಾಮದಲ್ಲಿ ಕಚೇರಿ ಸ್ಥಾಪಿಸಿ ದೇಶದ ವಿವಿಧ ಭಾಗಗಳಲ್ಲಿ ವಂಚನೆ ನಡೆಸುತ್ತಿದ್ದರು. ಬಂಧಿತರಿಂದ ಸುಮಾರು 1.46 ಕೋಟಿ ರೂ. ಹಣ ವಶಪಡಿಸಿಕೊಳ್ಳಲಾಗಿದೆ. ಶಿವಾಜಿನಗರದ 74 ವರ್ಷದ ನಿವೃತ್ತ ಶಿಕ್ಷಕಿಗೆ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವಿಡಿಯೋ ಕಾಲ್ ಮಾಡಿ, ಬ್ಯಾಂಕ್ ಖಾತೆಯಲ್ಲಿ ಅಕ್ರಮ ಹಣವಿದೆ ಎಂದು ಬೆದರಿಸಿ ಸುಮಾರು 24 ಕೋಟಿ ರೂ. ಹಣ ವರ್ಗಾವಣೆ ಮಾಡಿಸಿಕೊಂಡಿದ್ದರು. ಮತ್ತಷ್ಟು ಹಣಕ್ಕಾಗಿ ಒತ್ತಡ ಹೇರಿದಾಗ ವೃದ್ಧೆ ಚಿನ್ನಾಭರಣ ಅಡಮಾನ ಇಡಲು ಬ್ಯಾಂಕ್‌ಗೆ ತೆರಳಿದ್ದು, ಮ್ಯಾನೇಜರ್‌ಗೆ ಅನುಮಾನ ಬಂದ ಹಿನ್ನೆಲೆ ಪ್ರಕರಣ ಬೆಳಕಿಗೆ ಬಂದಿದೆ. ಇನ್ನೂ ಈ ಜಾಲದ ಪ್ರಮುಖ ಆರೋಪಿ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *