Breaking News

ಭಜರಂಗದಳ ಕಾರ್ಯರ್ತನ ಮೇಲೆ ಹಲ್ಲೆ; ಆರೋಪ

ರಾಣೆಬೆನ್ನೂರಿನ ಖತೀಬಗಲ್ಲಿಯಲ್ಲಿ ಗೋ ಹತ್ಯೆ ನಡೆಯುತ್ತಿರುವ ಸ್ಥಳವನ್ನು ಪೊಲೀಸರಿಗೆ ತೋರಿಸಲು ತೆರಳಿದ್ದ ಭಜರಂಗದಳ ಕಾರ್ಯಕರ್ತರ ಮೇಲೆ ಅನ್ಯ ಕೋಮಿನ ಕೆಲವರು ಹಲ್ಲೆ ನಡೆಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಹಲ್ಲೆಯಲ್ಲಿ ರುದ್ರೇಶ ಬುಕ್ಕಶೆಟ್ಟಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಈ ಕುರಿತು ಮಾತನಾಡಿದ ಭಜರಂಗದಳ ಮುಖಂಡರು, ನಗರದಲ್ಲಿ ಅಕ್ರಮ ಗೋ ಸಾಗಾಟ ಮತ್ತು ಗೋ ಹತ್ಯೆ ನಡೆಯುತ್ತಿರುವ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಹಲ್ಲೆ ನಡೆಸಿದವರನ್ನು ಕೂಡಲೇ ಬಂಧಿಸಬೇಕು, ಇಲ್ಲವಾದರೆ ಮಂಗಳವಾರ ರಾಣೆಬೆನ್ನೂರು ಬಂದ್‌ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *