ಬೆಳಗಾವಿ : ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಡೆದಿದೆ.ಮಹಾಂತೇಶ್, ಸಾಕ್ಷಿ ಹಾಗೂ ಅವರ ಮಗು ಮೃತ ದುರ್ದೈವಿಗಳು. ರಾಯಬಾಗ ರೈಲ್ವೆ ಸ್ಟೇಷನ್ ಸಮೀಪ ಬೈಕ್ ನಲ್ಲಿ ಸಾಗುತ್ತಿದ್ದಾಗ ಆಟೋಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಬೈಕ್ ಸವಾರ ಮಹಾಂತೇಶ್, ಅವರ ಪತ್ನಿ ಸಾಕ್ಷಿ ಹಾಗೂ 6 ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯಭಾಗ ಠಾಣೆಯ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಕುಟುಂಬಸ್ಥರ ರೋಧನ ಮುಗಿಲು ಮುಟ್ಟುವಂತಿದ್ದು, ನೋಡುಗರ ಎದೆಕರಗಿಸುವ ವಾತಾವರಣ ಸೃಷ್ಟಿಯಾಗಿತ್ತು. ರಾಯಬಾಗ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

