ಬಳ್ಳಾರಿಯಲ್ಲಿ ಐವತ್ತಕ್ಕೂ ಹೆಚ್ಚು ಗೋವುಗಳನ್ನು ಒಂದೇ ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ ಘಟನೆ ಬೆಳಕಿಗೆ ಬಂದಿದೆ. ಹಳೇ ಬೈಪಾಸ್‌ನ ಗೋಲಬಡಿ ರಸ್ತೆಯಲ್ಲಿರುವ ಕೊಟ್ಟಿಗೆಯಲ್ಲಿ ಗೋವುಗಳನ್ನು ಇರಿಸಲಾಗಿತ್ತು. ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಗೋವುಗಳು ಪತ್ತೆಯಾಗಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಿಂದೂ ಸಂಘಟನೆಗಳ ಮಾಹಿತಿ ಮೇರೆಗೆ ಕೌಲಬಜಾರ್ ಪೊಲೀಸರು ಸ್ಥಳದ ಮೇಲೆ ದಾಳಿ ನಡೆಸಿ ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಬಕ್ರೀದ್ ಹಿನ್ನೆಲೆ ಕಸಾಯಿಖಾನೆಗೆ ಸಾಗಿಸಲು ಗೋವುಗಳನ್ನು ಸಂಗ್ರಹಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪತ್ತೆಯಾದ ಗೋವುಗಳನ್ನು ಸುರಕ್ಷಿತವಾಗಿ ಗೋಶಾಲೆಗೆ ಕಳುಹಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

