ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ₹45 ಕೋಟಿ ನಕಲಿ ಬಿಲ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ವಿಶ್ರಾಂತ ಕುಲಪತಿ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ. 2017-18ರ ಅವಧಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಅಕ್ರಮ ಹಣ ವರ್ಗಾವಣೆ ನಡೆಸಿರುವ ಆರೋಪ ಕೇಳಿಬಂದಿದೆ. ಬಂಧಿತರಲ್ಲಿ ವಿಶ್ರಾಂತ ಕುಲಪತಿ ಎಚ್.ಡಿ. ನಾರಾಯಣಸ್ವಾಮಿ, ನಿವೃತ್ತ ಹಣಕಾಸು ನಿಯಂತ್ರಣಾಧಿಕಾರಿ ಕೆ.ಎಲ್. ಸುರೇಶ್, ಎಫ್‌ಡಿಎ ಮೃತ್ಯುಂಜಯ ಹಿರೇಮಠ ಹಾಗೂ ಖಾಸಗಿ ಎಂಟರ್‌ಪ್ರೈಸಸ್ ಮಾಲೀಕರು ಸೇರಿದ್ದಾರೆ. ನ್ಯಾಯಾಲಯದ ವಾರಂಟ್ ಹಿನ್ನೆಲೆ ಬೀದರ್ ಮತ್ತು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

