Breaking News

ನಗರದಲ್ಲಿ ಡ್ರಗ್ಸ್ ಮಾರಾಟ – ಕೇರಳ ಮೂಲದ ಪೆಡ್ಲರ್ಸ್ ಅರೆಸ್ಟ್!

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಾದಕ ವಸ್ತುಗಳ ಜಾಲಕ್ಕೆ ಬ್ರೇಕ್ ಹಾಕಲು ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ನಗರದ ಜೀವನ್ ಭೀಮಾ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಜುನೈದ್ ಮತ್ತು ಮೊಹಮ್ಮದ್ ನಬೀದ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.​ಬಂಧಿತರಿಂದ ಒಟ್ಟು 3.35 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಕಾರನ್ನು ಜಪ್ತಿ ಮಾಡಲಾಗಿದೆ. ಇದರಲ್ಲಿ 65 ಸಾವಿರ ರೂ. ಮೌಲ್ಯದ 1 ಕೆಜಿ 272 ಗ್ರಾಂ ಗಾಂಜಾ ಹಾಗೂ 2 ಲಕ್ಷದ 70 ಸಾವಿರ ರೂ. ಮೌಲ್ಯದ 27 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್ ಸೇರಿವೆ. ​ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜೀವನ್ ಭೀಮಾ ನಗರ ಠಾಣೆಯ ಪೊಲೀಸರು ಆರೋಪಿಗಳನ್ನು ಸದ್ಯ ಜೈಲಿಗಟ್ಟಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ನೆಟ್‌ವರ್ಕ್‌ನ ಹಿಂದಿರುವ ಇತರರಿಗಾಗಿ ತನಿಖೆ ಚುರುಕುಗೊಳಿಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *