ಬೆಂಗಳೂರು ನಗರದ ಅಂತರರಾಷ್ಟ್ರೀಯ ಅಂಚೆ ಕಚೇರಿಗೆ ವಿದೇಶದಿಂದ ಬಂದ ಅನುಮಾನಾಸ್ಪದ ಪಾರ್ಸಲ್‌ಗಳ ಮೇಲೆ ಸಿಸಿಬಿ ಮಾದಕ ವಸ್ತು ನಿಗ್ರಹದಳ ಪೊಲೀಸರು ದಾಳಿ ನಡೆಸಿ, 2.32 ಕೋಟಿ ರೂ. ಮೌಲ್ಯದ 3 ಕೆಜಿ 312 ಗ್ರಾಂ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಚೆ ಕಚೇರಿಗೆ ನಿಷೇಧಿತ ಮಾದಕ ವಸ್ತುಗಳಿರುವ ಮೂರು ಬಾಕ್ಸ್‌ಗಳು ಬಂದಿರುವ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಅವುಗಳನ್ನು ಜಪ್ತಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ವಿದೇಶದಿಂದ ಪಾರ್ಸಲ್ ತರಿಸಿಕೊಂಡಿದ್ದ ಮೂವರು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ. ಇನ್ನೊಂದೆಡೆ, ಜೆಬಿನಗರ ಠಾಣೆ ಪೊಲೀಸರು ಖಚಿತ ಮಾಹಿತಿ ಆಧರಿಸಿ ಟನಲ್ ರಸ್ತೆಯಲ್ಲಿ ದಾಳಿ ನಡೆಸಿ, ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ 27 ಗ್ರಾಂ ಎಂಡಿಎಂಎ, 1 ಕೆಜಿ 272 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು ಮೌಲ್ಯ ಸುಮಾರು 8 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

