Breaking News

ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ ಅರೆಸ್ಟ್, 15 ಕೋಟಿ ರೂ. ಜಪ್ತಿ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರತ್ಯೇಕವಾಗಿ 23 ಜನರನ್ನು ಬಂಧಿಸಲಾಗಿದ್ದು, 15 ಕೋಟಿ ರೂ. ಜಪ್ತಿ ಮಾಡಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಸಕ್ತ ಐಪಿಎಲ್ ಪಂದ್ಯಾವಳಿ ನಡೆಯುವ ವೇಳೆ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದವರ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ. ಸಿಸಿಬಿ ಡಿಸಿಪಿ ಬಿ.ಎಲ್. ಹರಿಬಾಬು ನೇತೃತ್ವದಲ್ಲಿ ಅಧಿಕಾರಿಗಳು ಐಪಿಎಲ್ ಪಂದ್ಯಾವಳಿ ವೇಳೆ ನಡೆಯುವ ಕ್ರಿಕೆಟ್ ಬೆಟ್ಟಿಂಗ್ ಮೇಲೆ ನಿಗಾ ವಹಿಸಿದ್ದರು. ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ವಿವಿಧ ಪೊಲೀಸ್ ಠಾಣೆಗಳಲ್ಲಿ 17 ಪ್ರಕರಣ ದಾಖಲಾಗಿದ್ದು. 23 ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಬಿ ಪೊಲೀಸ್ ಠಾಣೆಗಳಲ್ಲಿ 9 ಪ್ರಕರಣ ದಾಖಲಾಗಿವೆ. 4 ಪ್ರಕರಣಗಳಲ್ಲಿ ಬಂಧಿತರಾದ 5 ಆರೋಪಿಗಳಿಂದ 1.10 ಲಕ್ಷ ರೂ. ಮೌಲ್ಯದ 7 ಮೊಬೈಲ್ ಜಪ್ತಿ ಮಾಡಲಾಗಿದೆ. 13.37 ಕೋಟಿ ರೂ. ಮೌಲ್ಯದ ಗೇಮಿಂಗ್ ಆಯಪ್ ಗಳ ಚಿಪ್ಸ್ ಗಳನ್ನು ಜಪ್ತಿ ಮಾಡಲಾಗಿದೆ. ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ಒಟ್ಟು 15 ಕೋಟಿ ರೂ. ಮಾಡಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *