ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಸ್ಪತ್ರೆಗೆ ಭಾರೀ ಬೆಂಕಿ ತಗುಲಿದ ಘಟನೆ ಬೆಂಗಳೂರಿನ ಯಲಹಂಕದ ಎಂಎಸ್ ಪಾಳ್ಯ ಸಮೀಪದ ಅವೇಕ್ಷಾ ಆಸ್ಪತ್ರೆಯಲ್ಲಿ ನಡೆದಿದೆ. 20ಕ್ಕೂ ಹೆಚ್ಚು ರೋಗಿಗಳು ಇದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯ 3 ಅಂತಸ್ತಿನ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದ್ದು, ಕೂಡಲೇ ಕೆಲವು ಒಳ ರೋಗಿಗಳು ಆಸ್ಪತ್ರೆಯಿಂದ ಓಡಿ ಹೋಗಿದ್ದಾರೆ. ಉಳಿದ ರೋಗಿಗಳನ್ನು ಸಮೀಪದ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಮಾಹಿತಿ ತಿಳಿದ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

