ವಿಜಯಪುರ ಜಿಲ್ಲೆಯ ಕೊಲ್ಲಹಾರ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಚಿಂಚೋಳಿ ಪಟ್ಟಣದ ಸುನಿಲ್ ಕುಮಾರ್ ಶಾಂತಕುಮಾರ್ ಮನ್ನಳ್ಳಿ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾಂಡೇಲಿ ಹಾಗೂ ಬಂಟ್ವಾಳ ಪ್ರವಾಸ ಮುಗಿಸಿ ಸ್ನೇಹಿತರೊಂದಿಗೆ ಮರಳುವ ವೇಳೆ ಕಾರು ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದ್ದು, ನಾಲ್ವರು ಸ್ನೇಹಿತರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುನಿಲ್ ನಿಧನಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಂಸದ ಸಾಗರ್ ಖಂಡ್ರೆ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಚಿಂಚೋಳಿ ಪಟ್ಟಣದ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

