Breaking News

ದಿನಕ್ಕೆ 400 ರೂ. ಆಸೆ ತೋರಿಸಿ 13 ಸಾವಿರ ಜನರನ್ನು ಲೂಟಿ ಮಾಡಿದ ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

ದಾವಣಗೆರೆಯಲ್ಲಿ ನಕಲಿ ಕ್ರಿಪ್ಟೋ ಕರೆನ್ಸಿ ಆ್ಯಪ್ ಮೂಲಕ ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನ ಚೆಲ್ಲಪಂಡಿ ಸುಬ್ರಹ್ಮಣಿ (42) ಎಂಬ ಪ್ರಮುಖ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ನಾವಾಬಿಟ್‌. ಇನ್‌ ಎಂಬ ನಕಲಿ ಆ್ಯಪ್ ಮೂಲಕ 10 ಸಾವಿರ ರೂ. ಹೂಡಿಕೆ ಮಾಡಿದರೆ ದಿನಕ್ಕೆ 300-400 ರೂ. ಲಾಭ ಸಿಗುತ್ತದೆ ಎಂದು ನಂಬಿಸಿ ಜನರನ್ನು ಮೋಸಗೊಳಿಸಲಾಗಿತ್ತು. ಆರಂಭದಲ್ಲಿ ಹಣ ನೀಡಿ ವಿಶ್ವಾಸ ಗಳಿಸಿದ್ದ ಖದೀಮರು ಬಳಿಕ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ಖಾತೆಗಳನ್ನು ಬ್ಲಾಕ್ ಮಾಡಿದ್ದರು. ದಾವಣಗೆರೆಯಲ್ಲೇ ಸುಮಾರು 13 ಸಾವಿರ ಜನ ವಂಚನೆಗೆ ಒಳಗಾಗಿದ್ದು, ಸ್ಥಳೀಯ ಮಹಿಳೆಯರು, ಕೂಲಿ ಕಾರ್ಮಿಕರು ಹಾಗೂ ಸಣ್ಣ ವ್ಯಾಪಾರಿಗಳೇ ಹೆಚ್ಚಾಗಿ ಮೋಸಹೋಗಿದ್ದಾರೆ. ಪ್ರಕರಣ ಸಂಬಂಧ ಇನ್ನಿತರ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *