Breaking News

ಸಾರ್ವಜನಿಕರ ವಾಹನ ಧ್ವಂಸಗೊಳಿಸಿ ಪುಂಡಾಟಿಕೆ – ಮೂವರು ಕಿಡಿಗೇಡಿಗಳ ಸೆರೆ

ಬೆಂಗಳೂರಿನ ವಿ.ವಿ.ಪುರಂನಲ್ಲಿ ಸಾರ್ವಜನಿಕರ ಮೇಲೆ ಹಲ್ಲೆ ನಡೆಸಿ ವಾಹನಗಳನ್ನು ಜಖಂಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಅಭಿಷೇಕ್ ಅಲಿಯಾಸ್ ಪಾಂಡು, ಉಮೇಶ್ ಹಾಗೂ ಪುನೀತ್ ಅಲಿಯಾಸ್ ಟೋನಿ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೇ 20ರ ಬೆಳಗಿನ ಜಾವ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿದ್ದು, ಬಳಿಕ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ನಡೆಸಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆ ರಬಿಯಾಳನ್ನು ಹೆದರಿಸಲು ಬಂದಿದ್ದ ಆರೋಪಿಗಳು ಸಾರ್ವಜನಿಕರ ಮೇಲೂ ಹಲ್ಲೆ ನಡೆಸಿ ರಸ್ತೆಬದಿಯ ಬೈಕ್‌ಗಳನ್ನು ಪುಡಿಗಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಬಂಧಿತ ಮೂವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share News

About BigTv News

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *