Breaking News

ಧಾರವಾಡದಲ್ಲಿ ಜಮೀನು ವಿವಾದಕ್ಕೆ ಗುಂಡಿನ ದಾಳಿ: ಐವರು ಆರೋಪಿಗಳ ಬಂಧನ

ಧಾರವಾಡದ ತರಸಿನಕೊಪ್ಪ ಪ್ರದೇಶದಲ್ಲಿ ಜಮೀನು ವಿವಾದದ ಹಿನ್ನೆಲೆ ಎರಡು ಗುಂಪುಗಳ ನಡುವೆ ಭೀಕರ ಗಲಾಟೆ ನಡೆದು ಗುಂಡಿನ ದಾಳಿ ಸಂಭವಿಸಿದೆ. ಘಟನೆಯಲ್ಲಿ ವಿಟ್ಟಲ್ ಎಂಬ ಯುವಕನ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಪ್ರವೀಣ್ ಸುತ್ತಾರ್, ಸುಂದರ್ ಪೌಲ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸ್ಥಳದಿಂದ ಒಂದು ಪಿಸ್ತೂಲ್, ರಿವಾಲ್ವರ್ ಮತ್ತು ಫಾರ್ಚುನರ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತನಿಖೆ ಮುಂದುವರಿಸಿದ್ದಾರೆ.

Share News

About Shaikh BigTv

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *