ಬೆಂಗಳೂರು ಸಮೀಪದ ರಾಮಸಂದ್ರದಲ್ಲಿ ಹಣಕಾಸಿನ ವಿಚಾರಕ್ಕೆ ಆಟೋ ಚಾಲಕ ರಕ್ಷಿತ್ (25) ಅವರನ್ನು ಸ್ನೇಹಿತರೆ ಬರ್ಬರವಾಗಿ ಹತ್ಯೆ ಮಾಡಿ ನಿರ್ಜನ ಪ್ರದೇಶದಲ್ಲಿ ಹೂತು ಹಾಕಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಮೋಹಿನ್ ಪಾಷಾ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಅಪ್ರಾಪ್ತನನ್ನು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಿದ್ದಾರೆ. 8 ಸಾವಿರ ರೂ. ಸಾಲದ ವಿಚಾರವಾಗಿ ನಡೆದ ಗಲಾಟೆ ವೇಳೆ ಆರೋಪಿಗಳು ಕಲ್ಲು ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ ರಕ್ಷಿತ್‌ನನ್ನು ಕೊಲೆ ಮಾಡಿದ್ದರು. ಬಳಿಕ ಮೃತದೇಹವನ್ನು ರಾಮಸಂದ್ರ ಕೆರೆಯ ಬಳಿ ಹೂತು ಹಾಕಿ, ಆಟೋವನ್ನು ಜ್ಞಾನಭಾರತಿ ಬಳಿ ಬಿಟ್ಟು ಪರಾರಿಯಾಗಿದ್ದರು. ತಾಯಿಯ ದೂರಿನ ಮೇರೆಗೆ ತನಿಖೆ ನಡೆಸಿದ ಕುಂಬಳಗೋಡು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

