Breaking News

ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ

ಮಾಗಡಿ: ಉಡುಗುಂಟೆ ವೀರಾಪುರದ ಚನ್ನಿಗಪ್ಪನ ಪಾಳ್ಯದ ಸರ್ಕಾರಿ ಓಣಿ ಒತ್ತುವರಿ ತೆರವು ಕಾರ್ಯಕ್ಕೆ ತೆರಳಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತುವರಿದಾರರು ಮಂಗಳವಾರ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗ್ರಾಮ ಆಡಳಿತ ಅಧಿಕಾರಿ ಹಡಗಲಿ ಹೊನ್ನಪ್ಪ ಹಾಗೂ ಗ್ರಾಮ ಸಹಾಯಕ ಭರತ್‌ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಕಾರಿ ಜಾಗದ ಸರ್ವೇ ವೇಳೆ ಆರೋಪಿಗಳಾದ ಚಂದ್ರಶೇಖರ್‌ ಮತ್ತು ಮೋಹನ್‌ ಕುಮಾರ್‌ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತಾಯಿ ಜಯಮ್ಮಳ ಬಂಧನಕ್ಕೆ ಶೋಧ ಮುಂದುವರಿದಿದೆ. ತಹಸೀಲ್ದಾರ್‌ ಕೆ.ಆರ್‌. ರಂಜಿತ್‌ ಭೇಟಿ ನೀಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *