ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 150Aರಲ್ಲಿ ಬೊಲೆರೊ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಗುರುತು ಪತ್ತೆ ಕಾರ್ಯ ಮುಂದುವರಿದಿದೆ. ಇನ್ನೊಂದೆಡೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಆಲದಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ರೈತ ಪ್ರಸನ್ನ(40) ಮೃತಪಟ್ಟಿದ್ದಾರೆ. ಮೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಯಗಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

