ಬೆಂಗಳೂರು ನಗರದ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರೀತಿಸಿದ್ದ ಯುವತಿಯ ಮನೆಗೆ ಹೋಗುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ರಾಮನಗರದ ಬೀಡಿ ಕಾಲೋನಿ ನಿವಾಸಿ ಮೊಹಮದ್ ಖಾಸಿಂ(27) ಮೃತ ಯುವಕನಾಗಿದ್ದು, ಪೇಂಟಿಂಗ್ ಹಾಗೂ ಗುಜುರಿ ಕೆಲಸ ಮಾಡಿಕೊಂಡಿದ್ದನು. ಖಾಸಿಂ ಪ್ರೀತಿಸುತ್ತಿದ್ದ ಯುವತಿಗೆ ನಾಲ್ಕು ವರ್ಷಗಳ ಹಿಂದೆ ಬೇರೆ ವ್ಯಕ್ತಿಯೊಂದಿಗೆ ಮದುವೆಯಾಗಿತ್ತು. ಆದರೂ ಆತ ಆಗಾಗ್ಗೆ ಆಕೆಯ ಮನೆಗೆ ಹೋಗಿ ಬರುತ್ತಿದ್ದ ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಗಂಡನ ಮನೆಯವರು ಮೇ 25ರಂದು ಖಾಸಿಂ ಮೇಲೆ ಹಲ್ಲೆ ನಡೆಸಿದ್ದಾರೆ. ಸಾರ್ವಜನಿಕರು ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದರೂ, ಗಂಭೀರವಾಗಿ ಗಾಯಗೊಂಡಿದ್ದ ಖಾಸಿಂ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

