Breaking News

ಗೋಮಾಂಸ ಮಾರಾಟ ಅಡ್ಡೆ ಮೇಲೆ ದಾಳಿ; 50 ಕೆ.ಜಿ. ಮಾಂಸ ವಶ

ರಾಣೆಬೆನ್ನೂರು: ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾರಾಟ ಮಾಡುವ ಅಡ್ಡೆಯ ಮೇಲೆ ದಾಳಿ ನಡೆಸಿದ ಶಹರ ಠಾಣೆ ಪೊಲೀಸರು 50 ಕೆ.ಜಿ. ತೂಕದ ಮಾಂಸ ವಶಪಡಿಸಿಕೊಂಡ ಘಟನೆ ಇಲ್ಲಿಯ ಇಸ್ಲಾಂಪುರ ಓಣಿಯಲ್ಲಿ ನಡೆದಿದೆ.ಯಾರೋ ಆರೋಪಿತರು ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾರಾಟ ಮಾಡಲು ಮುಂದಾಗಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮಾಂಸ, ಕಬ್ಬಿಣದ ಚಾಕು, ಮಾಂಸ ನೇತು ಹಾಕುವ ಹುಕ್ಕುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *