ಮುಧೋಳ: ನಗರದ ಶಿವಾಜಿ ವೃತ್ತದ ಬಳಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ, ಬಿದರಿ ಗ್ರಾಮದ ದುರ್ಗಾದೇವಿ ದೇವಸ್ಥಾನ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.
ಬಿದರಿ ಗ್ರಾಮದ ವಸಂತ ಮಾದರ (37) ದೇವಸ್ಥಾನದ ಗರ್ಭಗುಡಿಯ ಬೀಗ ಮುರಿದು ಚಿನ್ನ-ಬೆಳ್ಳಿ ಆಭರಣ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ 6.09 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ತಾಮ್ರದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿಪಿಐ ಎಂ. ನಾಗರಡ್ಡಿ ಹಾಗೂ ಪಿಎಸ್‌ಐ ಅಜೀತಕುಮಾರ ಹೊಸಮನಿ ನೇತೃತ್ವದ ತಂಡ ಪ್ರಕರಣ ಭೇದಿಸಿದ್ದು, ಸಿಬ್ಬಂದಿಯ ಕಾರ್ಯಕ್ಕೆ ಎಸ್‌ಪಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

