Breaking News

ಮದುವೆ ಆಗಿದ್ದ ಗೆಳತಿಯನ್ನ ನೋಡಲು ಹೋಗಿದ್ದ ಗುಜರಿ ವ್ಯಾಪಾರಿ ಕೊಲೆ! ಗಂಡ ಮನೆಗೆ ಬಂದಾಗ ನಡಿದ್ದೇನು?

ಬೆಂಗಳೂರು: ಸ್ನೇಹಿತೆಯ ಮನೆಗೆ ಬಂದಿದ್ದ ಗುಜರಿ ವ್ಯಾಪಾರಿಯನ್ನು ಆಕೆಯ ಪತಿ ಹಾಗೂ ಸಂಬಂಧಿಕರು ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ ಮೂಲದ ಮೊಹಮ್ಮದ್ ಕಾಸಿಫ್ (27) ಮೃತ ದುರ್ದೈವಿ. ಶಾಲಾ ದಿನಗಳಿಂದ ಪರಿಚಯವಿದ್ದ ಸ್ನೇಹಿತೆಯನ್ನು ಭೇಟಿ ಮಾಡಲು ಬಾಪೂಜಿನಗರದ ಮನೆಗೆ ಬಂದಿದ್ದ ವೇಳೆ, ಆಕೆಯ ಪತಿ ಅಕ್ಬರ್ ಹಾಗೂ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಕಾಸಿಫ್ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಅಕ್ಬರ್ ಹಾಗೂ ಆತನ ಸಂಬಂಧಿಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *