Breaking News

ಆಸ್ತಿ ವ್ಯಾಜ್ಯದ ಹಿನ್ನೆಲೆಯಲ್ಲಿ ತಮ್ಮನನ್ನೇ ಕೊಂದ ಅಣ್ಣ-ತಮ್ಮಂದಿರು

ರಾಣೆಬೆನ್ನೂರು: ಆಸ್ತಿ ವ್ಯಾಜ್ಯದ ಹಿನ್ನೆಲೆಯಲ್ಲಿ ತಮ್ಮನನ್ನು ಅಣ್ಣ&ತಮ್ಮಂದಿರು ಸೇರಿ ಹಲ್ಲೆ ಮಾಡಿ ಕೊಲೆ ಮಾಡಿರುವ ಟನೆ ತಾಲೂಕಿನ ಕಜ್ಜರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.ಗ್ರಾಮದ ಕರಬಸಪ್ಪ ನಿಂಗಪ್ಪ ಚಿನ್ನದ (35) ಕೊಲೆಯಾದವನು. ಪ್ರಕರಣಕ್ಕೆ ಸಂಬಂಧಿಸಿ ಬಸವರಾಜಪ್ಪ ಹನುಮಂತಪ್ಪ ಚಿನ್ನದ ಸೇರಿ 11 ಜನರ ವಿರುದ್ಧ ದೂರು ದಾಖಲಾಗಿದೆ. ಇವರ ನಡುವೆ ತಮ್ಮ ಜಾಗ ಮಾರಾಟ ಮಾಡುವ ವಿಚಾರದಲ್ಲಿ ಮತ್ತು ರಸ್ತೆ ವಿಚಾರವಾಗಿ ವ್ಯಾಜ್ಯವಿತ್ತು. ಇದರಿಂದ ಮಂಗಳವಾರ ಬೆಳಗ್ಗೆ ಮನೆಯಲ್ಲಿ ಜಗಳ ಶುರುವಾಗಿದೆ. ಈ ಸಮಯದಲ್ಲಿ ಕರಬಸಪ್ಪನನ್ನು ಕೆಳಗೆ ಕೆಡವಿ ಒದ್ದಿದ್ದರಿಂದ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *