Breaking News

ಸಂತೆ, ಜಾತ್ರೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದ 8 ಮಂದಿ ಅರೆಸ್ಟ್

ರಾಮದುರ್ಗ: ಸಂತೆ, ಜಾತ್ರೆ ನಡೆಯುವ ವಿವಿಧ ಗ್ರಾಮಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದ ಎಂಟು ಆರೋಪಿಗಳನ್ನು ಕಟಕೋಳ ಪೋಲಿಸ್ ಠಾಣೆ ಪೋಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ವಿಕಾಸ್ ವೆಂಕಟೇಶ ಭೋವಿ, ಪ್ರವೀಣ ಭೋವಿ, ಸಂತೋಷ್, ಶಿವು, ವೆಂಕಟೇಶ್, ಅಕ್ಷಯ್, ಹುಬ್ಬಳ್ಳಿಯ ಸಚಿನ್ ಲಕ್ಷ್ಮಣ ಕಲ್ಲವಡ್ಡರ ಅವರನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಆಧರಿಸಿ ಪೊಲೀಸರ ವಿಶೇಷ ತಂಡ ರಚಿಸಿ ಎಸ್ಪಿ ಕೆ. ರಾಮರಾಜನ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದರು. ಬಂಧಿತರಿಂದ ಒಟ್ಟು 4.94 ಲಕ್ಷ ರೂಪಾಯಿ ಮೌಲ್ಯದ ವಿವಿಧ ಕಂಪನಿಯ 40 ಮೊಬೈಲ್ ಫೋನ್ ಗಳು, 5.40 ಲಕ್ಷ ರೂಪಾಯಿ ಮೌಲ್ಯದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಕಟಕೊಳ ಪೊಲೀಸ್ ಠಾಣೆ ವ್ಯಾಪ್ತಿಯ ಜನನಿಬಿಡ ಪ್ರದೇಶ, ಸಂತೆ, ಜಾತ್ರೆ ನಡೆಯುವ ವಿವಿಧ ಗ್ರಾಮಗಳಲ್ಲಿ ಆರೋಪಿಗಳು ಜನರ ಗಮನ ಬೇರೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದರು.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *