Breaking News

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

ಬೆಂಗಳೂರು : ಹಳೇ ಪ್ರೇಮದ ಹಿನ್ನೆಲೆ ಮಾಜಿ ಪ್ರೇಯಸಿಯ ಮನೆಗೆ ತೆರಳಿದ್ದ ಯುವಕನೊಬ್ಬ ಭೀಕರ ಹತ್ಯೆಗೆ ಒಳಗಾದ ಘಟನೆ ನಗರದಲ್ಲಿ ನಡೆದಿದೆ. ಮೃತನನ್ನು ಮೊಹಮ್ಮದ್ ಖಾಸಿಂ ಎಂದು ಗುರುತಿಸಲಾಗಿದೆ. ಯುವತಿಯ ಪತಿ ಹಾಗೂ ಕುಟುಂಬಸ್ಥರು ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಖಾಸಿಂ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೊಹಮ್ಮದ್ ಖಾಸಿಂ ಈ ಹಿಂದೆ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಕೆಲವು ಕಾರಣಗಳಿಂದ ಇಬ್ಬರ ನಡುವೆ ಬ್ರೇಕಪ್ ಆಗಿತ್ತು. ಬಳಿಕ ಯುವತಿಗೆ ಬೇರೆ ವ್ಯಕ್ತಿಯೊಂದಿಗೆ ಮದುವೆಯಾಗಿತ್ತು. ಆದರೆ ಇತ್ತೀಚೆಗೆ ಖಾಸಿಂ ಮತ್ತೆ ಆಕೆಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದ ಎಂದು ತಿಳಿದುಬಂದಿದೆ. ಘಟನೆ ನಡೆದ ದಿನ ಆತ ನೇರವಾಗಿ ಯುವತಿಯ ಮನೆಗೆ ತೆರಳಿದ್ದ ವೇಳೆ ಗಲಾಟೆ ಆರಂಭವಾಗಿದೆ. ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದು ಯುವತಿಯ ಪತಿ ಮತ್ತು ಕುಟುಂಬಸ್ಥರು ಖಾಸಿಂ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗಳಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *