Breaking News

ಅಕ್ರಮ ಅದಿರು ಸಾಗಣೆ ಲಾರಿಗಳು ವಶ

ಬಳ್ಳಾರಿ : ತಾಲೂಕಿನ ಹಲಕುಂದಿ ಗ್ರಾಮದ ವಿಆರ್‌ಕೆಪಿ ಫ್ಯಾಕ್ಟರಿ ಬಳಿ ಅಕ್ರಮವಾಗಿ ಕಬ್ಬಿಣದ ಅದಿರನ್ನು ಸಾಗಿಸುತ್ತಿದ್ದ ಜಾಲವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಎರಡು ಟಿಪ್ಪರ್ ಲಾರಿ ಹಾಗೂ 36 ಮೆಟ್ರಿಕ್ ಟನ್ ಕಬ್ಬಿಣದ ಅದಿರು ಜಪ್ತಿಗೊಳಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೌಲಬಜಾರ್ ಕೆ. ಸತ್ಯನಾರಾಯಣ, ಓಬುಳಾಪುರಂನ ಕೆ.ನಾಗರಾಜ್ ಬಂಧಿತರು. ಮೇ23ರಂದು ಆಂಧ್ರಪ್ರದೇಶದ ಸೋಮಲಾಪುರ ರೈಲ್ವೆ ಸ್ಲೈಡಿಂಗ್ಸ್ ಪ್ರದೇಶದಿಂದ ತಾಲೂಕಿನ ಹಲಕುಂದಿ ಗ್ರಾಮದಲ್ಲಿರುವ ಶ್ರೀತಿರುಪತಿ ಸ್ಟೀಲ್ಸ್ ಕಾಸ್ಟ್ ಲಿಮಿಟೆಡ್ ಘಟಕಕ್ಕೆ ಅದಿರು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *