ಶಿವಮೊಗ್ಗ: ಕಳೆದ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಸೊರಬ ಪೊಲೀಸರು ಬೈಂದೂರಿನಲ್ಲಿ ಪತ್ತೆ ಮಾಡಿ ಬಂಧಿಸಿದ್ದಾರೆ. ದತ್ತಗುರು ಬಂಧಿತ ಆರೋಪಿ. ಈತನ ವಿರುದ್ಧ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಆರೋಪಿ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆತನಿಗೆ ಸೊರಬದ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿತ್ತು. ಆದರೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಧನದ ವಾರೆಂಟ್ ಜಾರಿಯಾಗಿತ್ತು. ಸೊರಬ ವೃತ್ತ ನಿರೀಕ್ಷಕ ಮತ್ತು ಪಿಎಸ್‌ಐ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸೋಮನಾಯ್ಕ, ಮಲ್ಲೇಶ್ ಅವರು ದತ್ತಗುರುವನ್ನು ಬೈಂದೂರಿನಲ್ಲಿ ಪತ್ತೆ ಮಾಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

