Breaking News

ಕೇರಳ: ಇ.ಡಿ. ವಾಹನ ಮೇಲೆ ದಾಳಿ ಮಾಡಿದ್ದ 8 ಮಂದಿ ಬಂಧನ

ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದ್ದ ಸಂದರ್ಭದಲ್ಲಿ ಅಧಿಕಾರಿಗಳ ವಾಹನಗಳ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ.ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳು, ವಾಹನಗಳ ಮೇಲೆ ನಡೆದ ದಾಳಿ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ 8 ಮಂದಿಯನ್ನು ಬಂಧಿಸಿದ್ದು, ಹಿಂಸಾಚಾರದಲ್ಲಿ ಭಾಗಿಯಾದ ಇನ್ನಷ್ಟು ಜನರನ್ನು ಗುರುತಿಸಲಾಗಿದೆ ಎಂದು ಹೇಳಿದರು. ಇಡಿ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಯ ಮೇಲಿನ ದಾಳಿಗೆ ಸಂಬಂಧಿಸಿದಂತೆ ಕೇರಳ ಪೊಲೀಸರು ಸುಮಾರು 300 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ರಮೇಶ್ ಚೆನ್ನಿತ್ತಲ ಸೂಚನೆ ನೀಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *