Breaking News

ಬಸ್ಸು – ಬೈಕ್‌ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಸುತ್ತುಕೋಟೆ ಸಮೀಪ ಗುರುವಾರ ಸಂಜೆ ನಡೆದಿದೆ. ಮೃತನನ್ನು ಅಬ್ನಾನ್‌ (23) ಎಂದು ಗುರುತಿಸಲಾಗಿದೆ. ಶಿಕಾರಿಪುರದಿಂದ ಶಿವಮೊಗ್ಗ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಎದುರಿನಿಂದ ಬಂದ ಪಲ್ಸರ್‌ ಬೈಕ್‌ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ ಬಸ್ಸಿನ ಮುಂಭಾಗಕ್ಕೆ ಸಿಲುಕಿಕೊಂಡು ಬೆಂಕಿಗಾಹುತಿಯಾಗಿದೆ. ಬೈಕಿನಲ್ಲಿದ್ದವರ ದೇಹಗಳಿಗೂ ಬೆಂಕಿ ತಗುಲಿರುವುದಾಗಿ ತಿಳಿದುಬಂದಿದೆ. ಅಪಘಾತದ ಬಳಿಕ ಬಸ್‌ನಲ್ಲಿದ್ದ ಪ್ರಯಾಣಿಕರು ಆತಂಕಗೊಂಡು ಎಮರ್ಜನ್ಸಿ ಬಾಗಿಲು ಹಾಗೂ ಕಿಟಕಿಗಳ ಮೂಲಕ ಹೊರಗೆ ಬಂದಿದ್ದಾರೆ. ಮಾಹಿತಿ ತಿಳಿದ ಕುಂಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *