Breaking News

ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಟೈರ್ ಸ್ಪೋಟಗೊಂಡು ನಿಯಂತ್ರಣ ತಪ್ಪಿದ ಕಾರ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಳ್ಳಕೆರೆಯ ಛಾಯಾಗ್ರಾಹಕ ರಾಘವೇಂದ್ರ, ಪ್ರಮೋದ್, ರುದ್ರೇಶ್, ಸೋಮು, ಮಲ್ಲಿಕಾರ್ಜುನ ಮೃತಪಟ್ಟವರು ಎಂದು ಹೇಳಲಾಗಿದೆ. ಮೊಳಕಾಲ್ಮೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೊಳಕಾಲ್ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *