Breaking News

ಮೊಳಕಾಲ್ಮೂರು ಬಳಿ ರಸ್ತೆ ಅಪಘಾತ ; ಚಳ್ಳಕೆರೆಯ ಐವರು ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಬ್ರಿಡ್ಜ್, ಶ್ರೀನಿವಾಸ ಡಾಬಾ ಮುಂಭಾಗದಲ್ಲಿ ಗುರುವಾರ ರಾತ್ರಿ ಸುಮಾರು 9:45 ರ ವೇಳೆಯಲ್ಲಿ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಳ್ಳಕೆರೆ ಮೂಲದ ಛಾಯಾಗ್ರಾಹಕರ ಸಂಘದ ಸಹ ಕಾರ್ಯದರ್ಶಿ ರಾಘವೇಂದ್ರ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಅದೇ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿದೆ. ಈ ವೇಳೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ರಘು(40 ವರ್ಷ), ರುದ್ರೇಶ(36 ವರ್ಷ), ಪ್ರಮೋದ(35 ವರ್ಷ), ಸೋಮಶೇಖರ (35 ವರ್ಷ) ಮತ್ತು ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಮೊಳಕಾಲ್ಮುರು ಪಿಎಸ್‌ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *