Breaking News

ಧರ್ಮಸ್ಥಳದಲ್ಲಿ ವೃದ್ಧೆಗೆ ಮತ್ತು ಬರುವ ಜ್ಯೂಸ್ ನೀಡಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಶ್ರೀ ಕ್ಷೇತ್ರ ಧರ್ಮಸ್ಥಳ ಗೆ ಯಾತ್ರೆಗೆ ಬಂದಿದ್ದ ಬೆಂಗಳೂರಿನ ಜೆಪಿ ನಗರ ನಿವಾಸಿ ಪ್ರೇಮಾ(70) ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಲಡ್ಡು ಮತ್ತು ಜ್ಯೂಸ್ ನೀಡಿ ಅಸ್ವಸ್ಥರನ್ನಾಗಿಸಿ ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ. ದೇವರ ದರ್ಶನದ ಬಳಿಕ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕುಳಿತಿದ್ದ ವೇಳೆ ಆರೋಪಿಯು ಮಾತುಕತೆ ನಡೆಸಿ ಪ್ರಸಾದದ ನೆಪದಲ್ಲಿ ಲಡ್ಡು ಹಾಗೂ ಜ್ಯೂಸ್ ನೀಡಿದ್ದಾನೆ. ಬಳಿಕ ಅಸ್ವಸ್ಥಗೊಂಡ ಪ್ರೇಮಾ ಅವರನ್ನು ದೇವಾಲಯದ ಮಹಾದ್ವಾರದ ಬಳಿ ಕೂರಿಸಿ, ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಮತ್ತು 7 ಸಾವಿರ ರೂ. ನಗದು ಕಳವು ಮಾಡಿ ಪರಾರಿಯಾಗಿದ್ದಾನೆ. ಅಸ್ವಸ್ಥಗೊಂಡಿದ್ದ ಪ್ರೇಮಾ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಈ ಸಂಬಂಧ ಧರ್ಮಸ್ಥಳ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *