Breaking News

ದೊಡ್ಡಬಳ್ಳಾಪುರ | ಗೋವು ಅಕ್ರಮ ಸಾಗಾಟ: ಬಂಧನ

ದೊಡ್ಡಬಳ್ಳಾಪುರ: ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದೆ ಗೋವುಗಳನ್ನು ಸಾಗಿಸುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದು, ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರಿನಿಂದ ದಾಬಸ್‌ಪೇಟೆ ಕಡೆಗೆ ಸರಕು ಸಾಗಣೆ ವಾಹನದಲ್ಲಿ ನಾಲ್ಕು ಸೀಮೆ ಹಸುಗಳನ್ನು ಸಾಗಿಸಲಾಗುತ್ತಿತು. ಕಂಟನಕುಂಟೆ ರಸ್ತೆಯಲ್ಲಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಸೂಕ್ತ ದಾಖಲೆ ಇಲ್ಲದೆ ಗೋವುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿದ್ದದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೋವುಗಳನ್ನು ಗೋ ಶಾಲೆಗೆ ಬಿಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಇನ್‌ಸ್ಪೆಕ್ಟರ್‌ ಎಂ.ಬಿ. ನವೀನ್‌ಕುಮಾರ್‌ ತಿಳಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *