Breaking News

ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: ಆಸ್ತಿ ವಿವಾದಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡಿಕ್ಕಿ 6 ಜನರ ಬರ್ಬರ ಕೊಲೆ!

ವಿಜಯಪುರ: ಜಿಲ್ಲೆಯ ಭೀಮಾತೀರ ಪ್ರದೇಶ ಮತ್ತೊಮ್ಮೆ ರಕ್ತಪಾತಕ್ಕೆ ಸಾಕ್ಷಿಯಾಗಿದೆ. ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಜಮೀನು ವಿವಾದ ಹಿನ್ನೆಲೆ ಎರಡು ಕುಟುಂಬಗಳ ನಡುವೆ ನಡೆದ ಭೀಕರ ಘರ್ಷಣೆಯಲ್ಲಿ ಆರು ಜನರನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ಚಂದ್ರಶೇಖರ್ ನಿರಾಳೆ ಹಾಗೂ ಶಬ್ಬಿರ್ ನದಾಫ್ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತರ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ. ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವೆ ಹಲವು ದಿನಗಳಿಂದ ಜಮೀನು ವಿಚಾರವಾಗಿ ತೀವ್ರ ವೈಷಮ್ಯವಿದ್ದು, ಇದೇ ಗಲಾಟೆ ಕೊಲೆಕಾಂಡಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಘಟನೆಯ ಬಳಿಕ ಗೋವಿಂದಪುರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ಮುಂದುವರಿದಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *