ಬೆಂಗಳೂರು- ಅಕ್ರಮವಾಗಿ 50 ನಿವೇಶನಗಳಿಗೆ ಎ ಖಾತಾ ಮಾಡಿಕೊಟ್ಟ ಆರೋಪ ಎದುರಿಸುತ್ತಿರುವ ಎಆರ್ಒ ಮಂಜುಳಾ ಅವರು ಮತ್ತೆ 30ಕ್ಕೂ ಹೆಚ್ಚು ನಿವೇಶನಗಳಿಗೆ ಖಾತಾ ಮಂಜೂರು ಮಾಡಿರುವುದಾಗಿ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಆರೋಪಿಸಿದ್ದಾರೆ. ಈ ಕುರಿತು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ರಾವ್ ಹಾಗೂ ಪಶ್ಚಿಮ ವಲಯ ಪಾಲಿಕೆ ಆಯುಕ್ತರಿಗೆ ದೂರು ಸಲ್ಲಿಸಿ, ಮಂಜುಳಾ ಅವರನ್ನು ತಕ್ಷಣ ಅಮಾನತುಗೊಳಿಸುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ಹೇರೋಹಳ್ಳಿ ಗ್ರಾಮದ ಸರ್ವೆ ನಂ.56/1ರ 4.20 ಎಕರೆ ಜಮೀನಿನಲ್ಲಿ ಬಿಬಿಎಂಪಿ ಹಾಗೂ ಬಡಾ ಅನುಮೋದನೆ ಇಲ್ಲದೆ ಅನಧಿಕೃತ ಬಡಾವಣೆ ನಿರ್ಮಿಸಿ, ನಿಯಮ ಉಲ್ಲಂಘಿಸಿ ಎ ಖಾತಾ ಮತ್ತು ಇ ಖಾತಾ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಖಾತೆ ಮಂಜೂರಿಗಾಗಿ ಕೋಟ್ಯಂತರ ರೂಪಾಯಿ ಲಂಚ ಪಡೆದಿರುವ ಆರೋಪವೂ ಕೇಳಿಬಂದಿದೆ. ಈ ಅಕ್ರಮಗಳಿಂದ ಪಾಲಿಕೆಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವುದಾಗಿ ಎನ್.ಆರ್. ರಮೇಶ್ ಎಚ್ಚರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

