Breaking News

ಅನೈತಿಕ ಸಂಬಂಧ ದುರಂತ ಅಂತ್ಯ: ಬೆಂಗಳೂರನ್ನು ಬೆಚ್ಚಿ ಬೀಳಿಸಿದ ಘಟನೆ

ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ ಕೊಲೆ ಪ್ರಕರಣ ರಾಜ್ಯಾದ್ಯಂತ ಆತಂಕ ಮೂಡಿಸಿದೆ. ರಾಮನಗರ ಜಿಲ್ಲೆಯ ಬೀಡಿ ಕಾಲೋನಿ ನಿವಾಸಿ 27 ವರ್ಷದ ಮೊಹಮ್ಮದ್ ಖಾಸಿಂ ಅವರು ಗುಜರಿ ಅಂಗಡಿ ನಡೆಸುತ್ತಿದ್ದು, ಅರ್ಬಿಯಾ ಕೌಸರ್ ಜೊತೆ ಮದುವೆಗೆ ಮುನ್ನ ಹಲವು ವರ್ಷಗಳಿಂದ ಪ್ರೇಮ ಸಂಬಂಧ ಹೊಂದಿದ್ದರು. ಬಳಿಕ ಅರ್ಬಿಯಾ ಕೌಸರ್ ಅವರು ಮೊಹಮ್ಮದ್ ಅಕ್ಬರ್ ಅವರನ್ನು ವಿವಾಹವಾದರೂ, ಖಾಸಿಂ ಜೊತೆಗಿನ ಸಂಪರ್ಕ ಸಾಮಾಜಿಕ ಜಾಲತಾಣಗಳ ಮೂಲಕ ಮುಂದುವರಿದಿತ್ತು ಎನ್ನಲಾಗಿದೆ. ಈ ವಿಚಾರ ಪತಿ ಅಕ್ಬರ್‌ಗೆ ತಿಳಿದ ಬಳಿಕ ಪತ್ನಿಗೆ ಹಲವು ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೂ ಸಂಬಂಧ ಮುಂದುವರಿದ ಹಿನ್ನೆಲೆಯಲ್ಲಿ ಮೇ 25ರಂದು ಖಾಸಿಂ ಅವರು ಅರ್ಬಿಯಾ ಮನೆಗೆ ಬಂದ ವೇಳೆ ಅಕ್ಬರ್ ಹಾಗೂ ಅವರ ಸಂಬಂಧಿಕರು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಖಾಸಿಂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬೈಯಪ್ಪನಹಳ್ಳಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿದಿದ್ದು, ಸಾಮಾಜಿಕ ಜಾಲತಾಣಗಳಿಂದ ಮತ್ತೆ ಬೆಳೆದ ಸಂಬಂಧವೇ ಕೊನೆಗೆ ದುರಂತಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *