ಪುಣೆ: ಶಂಕಿತ ನಕಲಿ ಮದ್ಯ ಸೇವನೆಯಿಂದ ಪುಣೆ ಮತ್ತು ಸುತ್ತಮುತ್ತ ಎರಡು ದಿನಗಳಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿರುವ ಘಟನೆ ಆತಂಕ ಸೃಷ್ಟಿಸಿದೆ. ಮೂವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಿಂಪ್ರಿ-ಚಿಂಚ್ವಾಡದ ಫುಗೇವಾಡಿ ಪ್ರದೇಶದಲ್ಲಿ ಏಳು ಮಂದಿ ಹಾಗೂ ಹಡಪ್ಸರ್ ಭಾಗದಲ್ಲಿ ಐವರು ಮೃತಪಟ್ಟಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಇಬ್ಬರು ಸಹೋದರರೂ ಸೇರಿದ್ದಾರೆ. ಮದ್ಯದಲ್ಲಿ ವಿಷಪದಾರ್ಥ ಮಿಶ್ರಣವಾಗಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ. ಪ್ರಕರಣಕ್ಕೆ ಸಂಬಂಧಿಸಿ ಯೋಗೇಶ್ ವಾಂಖೇಡೆ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮದ್ಯ ಪೂರೈಕೆ ಜಾಲದ ಕುರಿತು ತನಿಖೆ ಮುಂದುವರಿದಿದೆ. ಘಟನೆಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಮಗ್ರ ತನಿಖೆಗೆ ಆದೇಶ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

