Breaking News

ಡೇಟಿಂಗ್​ ಆಯಪ್​ನಲ್ಲಿ ಸುಂದರಿಯ ನೋಡುತ್ತಲೇ 1.66 ಕೋಟಿ ರೂ. ಕಳಕೊಂಡ ಬೆಂಗಳೂರು ಟೆಕ್ಕಿ

ಬೆಂಗಳೂರು: ಡೇಟಿಂಗ್ ಆಪ್‌ನಲ್ಲಿ ಪರಿಚಯವಾದ ಯುವತಿಯ ನಕಲಿ ಪ್ರೇಮದ ಬಲೆಗೆ ಬಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ₹1.66 ಕೋಟಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ‘ರಿಯಾ ಅಗರ್ವಾಲ್’ ಎಂದು ಪರಿಚಯಿಸಿಕೊಂಡಿದ್ದ ಯುವತಿ ಮದುವೆಯ ಭರವಸೆ ನೀಡಿ, ಆನ್‌ಲೈನ್ ಹೂಡಿಕೆ ಯೋಜನೆಯಲ್ಲಿ ಹಣ ಹೂಡಲು ಪ್ರೇರೇಪಿಸಿದ್ದಳು. ಫೆಬ್ರವರಿ 15ರಂದು ‘ಟಂಟನ್’ ಆಪ್‌ನಲ್ಲಿ ಪರಿಚಯವಾದ ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಬಳಿಕ ಯುವತಿ ಭಾರಿ ಲಾಭದ ಆಮಿಷವೊಡ್ಡಿ ಹೂಡಿಕೆ ಮಾಡಲು ಹೇಳಿದ್ದಾಳೆ. ಆಕೆಯ ಮಾತು ನಂಬಿದ ಸೌರವ್ ದುಬೆ ಸುಮಾರು ಮೂರು ತಿಂಗಳಲ್ಲಿ ಹಂತ ಹಂತವಾಗಿ ₹1.66 ಕೋಟಿ ಹೂಡಿಕೆ ಮಾಡಿದ್ದಾನೆ. ಆದರೆ ಅವನಿಗೆ ಮರಳಿದ್ದು ಕೇವಲ ₹4,250 ಮಾತ್ರ. ಹಣ ಹಿಂದಿರುಗಿಸುವಂತೆ ಕೇಳುತ್ತಿದ್ದಂತೆಯೇ ಯುವತಿಯ ಫೋನ್ ಸ್ವಿಚ್ ಆಫ್ ಆಗಿದ್ದು, ಸಂಪರ್ಕ ಕಡಿತಗೊಂಡಿದೆ. ತಾನು ಸೈಬರ್ ವಂಚನೆಗೆ ಒಳಗಾಗಿರುವುದನ್ನು ಅರಿತ ಸೌರವ್, ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *