Breaking News

ಶಾಲೆಯಲ್ಲಿ ಅಗ್ನಿ ಅವಘಡ – ತಪ್ಪಿದ ಭಾರೀ ದುರಂತ!

ರಾಜಧಾನಿ ಬೆಂಗಳೂರಿನ ನಾಗದೇವನಹಳ್ಳಿಯಲ್ಲಿರುವ ಚಿತ್ರಕೂಟ ಕೌಸಲ್ಯ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶಾಲಾ ಕಟ್ಟಡದಿಂದ ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಕಾಣಿಸಿಕೊಂಡಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದರು. ಅದೃಷ್ಟವಶಾತ್ ಇಂದು ಪೋಷಕರ ಸಭೆ ಇದ್ದ ಕಾರಣ ವಿದ್ಯಾರ್ಥಿಗಳಿಗೆ ತರಗತಿಗಳು ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಒಂದು ವೇಳೆ ಮಕ್ಕಳು ಶಾಲೆಯಲ್ಲಿದ್ದರೆ ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಶಾಲೆಯ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇದ್ದ ಕಾರಣ ಆತಂಕ ಮತ್ತಷ್ಟು ಹೆಚ್ಚಾಗಿತ್ತು. ಸದ್ಯ ಬೆಂಕಿಗೆ ನಿಖರ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *