ರಾಯಚೂರು: ಬಸ್ ನಿಲ್ದಾಣದಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಮಹಿಳೆ ತಕ್ಕ ಪಾಠ ಕಲಿಸಿದ ಘಟನೆ ಲಿಂಗಸುಗೂರಿನಲ್ಲಿ ನಡೆದಿದೆ. ಸಾರ್ವಜನಿಕರ ಸಮ್ಮುಖದಲ್ಲೇ ಯುವಕನಿಗೆ ಚಪ್ಪಲಿ ಏಟು ಬಿದ್ದಿದ್ದು, ಬಳಿಕ ಪ್ರಯಾಣಿಕರು ಕೂಡ ಆತನಿಗೆ ತರಾಟೆ ತೆಗೆದುಕೊಂಡಿದ್ದಾರೆ. ಮಹಿಳೆ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಯುವಕ ಅನುಚಿತವಾಗಿ ವರ್ತಿಸಿ ಅಶ್ಲೀಲವಾಗಿ ಮಾತನಾಡಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಮಹಿಳೆ ಆತನನ್ನು ಪ್ರಶ್ನಿಸಿ, ಬಳಿಕ ಕೆನ್ನೆಗೆ ಬಾರಿಸಿ ಚಪ್ಪಲಿಯಿಂದ ಥಳಿಸಿದ್ದಾರೆ. ಘಟನೆಯಿಂದ ಕೆಲಕಾಲ ಬಸ್ ನಿಲ್ದಾಣದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ಯುವಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಯುವಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಘಟನೆ ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯವಾಗಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

