Breaking News

ಕಾರು ರಿವರ್ಸ್ ತೆಗೆಯಿರಿ ಎಂದಿದ್ದಕ್ಕೆ ತಂದೆ-ಮಗನಿಗೆ ಚಾಕು ಇರಿತ!

ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ರಸ್ತೆ ವಿಚಾರಕ್ಕೆ ಸಂಬಂಧಿಸಿದ ಸಣ್ಣ ಗಲಾಟೆ ಚಾಕು ಇರಿತಕ್ಕೆ ತಿರುಗಿದ್ದು, ತಂದೆ-ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರನ್ನು ಹಿಂದಕ್ಕೆ ತೆಗೆಯುವಂತೆ ಹೇಳಿದ್ದಕ್ಕೆ ನಶೆಯಲ್ಲಿದ್ದ ಇಬ್ಬರು ಯುವಕರು ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾರೆ. ಗಾಯಗೊಂಡ ನವೀನ್ (42) ಮತ್ತು ಅವರ 16 ವರ್ಷದ ಮಗ ತಾರಕೇಶ್ ಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರ್ವಜನಿಕರು ಒಬ್ಬ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಘಟನೆಯ ಕುರಿತು ಆನೇಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *