ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆ ಭೀಕರ ಹತ್ಯಾಕಾಂಡ ನಡೆದಿದ್ದು, ಒಂದೇ ಕುಟುಂಬದ ಆರು ಮಂದಿ ಕೊಲೆಯಾಗಿದ್ದಾರೆ. ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ಚಂದ್ರಕಾಂತ ನಿರಾಳೆ ಸೇರಿದಂತೆ ಆರು ಜನರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಾರು 15 ವರ್ಷಗಳಿಂದ ತಕರಾರಿನಲ್ಲಿದ್ದ ಜಮೀನನ್ನು ನಿರಾಳೆ ಕುಟುಂಬ ಖರೀದಿಸಿ ಉಳುಮೆ ಆರಂಭಿಸಿದ್ದೇ ಈ ದಾಳಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಹಳೆಯ ವೈಷಮ್ಯ ಮತ್ತು ಜಮೀನು ವಿವಾದವೇ ಹತ್ಯೆಯ ಹಿನ್ನೆಲೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು, ಬೆರಳು ಮುದ್ರೆ ಹಾಗೂ ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

